ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ನಂದಿನ ಹಾಲಿನ ದರ 2.50 ರೂ. ಹೆಚ್ಚಳ? (Nandini Milk | KMF | Yeddyurappa | Karnataka)
Bookmark and Share Feedback Print
 
ರಾಜ್ಯದ ನಂದಿನಿ ಹಾಲಿನ ದರ ಏರಿಕೆಯಾಗುವುದು ಬಹುತೇಕ ಖಚಿತವಾಗಿದ್ದು, ಪ್ರತಿ ಲೀಟರ್‌ಗೆ 2.50ರೂ.ಗಳಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುನ್ಸೂಚನೆ ನೀಡಿದ್ದಾರೆ.

ಕರ್ನಾಟಕ ಹಾಲು ಮಹಾಮಂಡಲದ ಆಡಳಿತ ಮಂಡಳಿ ಸಭೆ ಶನಿವಾರ ನಡೆಯಲಿದ್ದು, ಸಭೆಯಲ್ಲಿ ದರ ಏರಿಕೆ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಮುಖ್ಯಮಂತ್ರಿಗಳು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.

ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಈಗಾಗಲೇ ಸಹಕಾರ ಸಚಿವ ಲಕ್ಷ್ಮಣ ಸವದಿ ಹಾಗೂ ಕೆಎಂಎಫ್ ಅಧ್ಯಕ್ಷ ಜಿ. ಸೋಮಶೇಖರ್ ರೆಡ್ಡಿ ಚರ್ಚೆ ನಡೆಸಿದ್ದಾರೆ.

ಅಲ್ಲದೆ, ಸರ್ಕಾರ ದರ ಏರಿಕೆಗೆ ಸಂಬಂಧಿಸಿ ಈ ಹಿಂದೆ ನೀಡಿರುವ 30(ಬಿ) ನಿರ್ದೇಶನವನ್ನು ತೆರವು ಮಾಡಲಿದೆ. ಏಕೆಂದರೆ ಈ ನಿರ್ದೇಶನ ತೆರವು ಮಾಡದೆ ದರ ಏರಿಕೆ ಮಾಡಲು ಅವಕಾಶ ಇಲ್ಲ. ಆದ್ದರಿಂದಲೇ ದರ ಮೊದಲಿಗೆ ಈ ನಿರ್ದೇಶನವನ್ನು ತೆರವು ಮಾಡಬೇಕಾಗುತ್ತದೆ.
ಸಂಬಂಧಿತ ಮಾಹಿತಿ ಹುಡುಕಿ