ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಹಣದುಬ್ಬರ ದರದತ್ತ ಆರ್‌ಬಿಐ ನಿಗಾವಹಿಸಲಿ:ಪ್ರಧಾನಿ (Manmohan Singh | RBI | Indian economy | Growth path)
Bookmark and Share Feedback Print
 
ರಿಸರ್ವ್ ಬ್ಯಾಂಕ್ ದೇಶದ ಆರ್ಥಿಕತೆ ಚೇತರಿಕೆ ಹಾಗೂ ಹಣದುಬ್ಬರ ನಿಯಂತ್ರಣಕ್ಕಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್‌ನ ವಜ್ರಮಹೋತ್ವ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಡಾ.ಸಿಂಗ್, ಆರ್‌ಬಿಐ ನಿರಂತರ ಹಣದುಬ್ಬರ ಏರಿಕೆಯನ್ನು ಪರಿಶೀಲಿಸಿ, ಆರ್ಥಿಕ ಕ್ಷೇತ್ರ ಸ್ಥಿರತೆಯತ್ತ ಗಮನಹರಿಸಬೇಕಾಗಿದೆ. ಅಗತ್ಯವಾದಲ್ಲಿ ಕಠಿಣ ನಿಲುವುಗಳನ್ನು ತೆಗೆದುಕೊಳ್ಳಲು ಹಿಂಜರಿಯಬಾರದು ಎಂದು ತಿಳಿಸಿದ್ದಾರೆ.

11ನೇ ಪಂಚವಾರ್ಷಿಕ ಯೋಜನೆಯ ಮುಕ್ತಾಯಕ್ಕೆ, ಭಾರತೀಯ ಆರ್ಥಿಕತೆ 2011-12ರ ಅವಧಿಯಲ್ಲಿ ಶೇ.9ಕ್ಕೆ ತಲುಪುವ ಸಾಧ್ಯತೆಗಳಿವೆ. 12ನೇ ಪಂಚವಾರ್ಷಿಕ ಯೋಜನೆಯಲ್ಲಿ ದೇಶದ ಜಿಡಿಪಿ ದರ ಶೇ.10ಕ್ಕೆ ತಲುಪಲು ಸೂಕ್ತ ಯೋಜನೆಗಳನ್ನು ಹಮ್ಮಿಕೊಳ್ಳುವಂತೆ ಹೇಳಿದ್ದಾರೆ.

ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಪಾತ್ರ ತುಂಬಾ ಮಹತ್ವದ್ದಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಆರ್ಥಿಕತೆ ಸ್ಥಿರತೆಗಾಗಿ ಸದೃಢ ಆರ್ಥಿಕ ನಿಯಮಗಳನ್ನು ಜಾರಿಗೆ ತರುವುದು ಅಗತ್ಯವಾಗಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ