ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಬಲವರ್ಧನೆ (Rupee | Dollar | Stock markets | Foreign funds | Forex market)
Bookmark and Share Feedback Print
 
ದೇಶಿಯ ಶೇರುಪೇಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ 15 ಪೈಸೆ ಚೇತರಿಕೆ ಕಂಡು 44.74 ರೂಪಾಯಿಗಳಿಗೆ ತಲುಪಿದೆ.

ದೇಶಿಯ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳ ಮತ್ತು ಏಷ್ಯಾ ಕರೆನ್ಸಿಗಳ ಎದುರು ಡಾಲರ್ ದುರ್ಬಲವಾಗಿದ್ದರಿಂದ ರೂಪಾಯಿ ಮೌಲ್ಯ ಚೇತರಿಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 117.88 ಪಾಯಿಂಟ್‌ಗಳ ಏರಿಕೆ ಕಂಡು 17,810.50 ಅಂಕಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ 20 ಪೈಸೆ ಏರಿಕೆ ಕಂಡು 44.89/90 ರೂಪಾಯಿಗಳಿಗೆ ತಲುಪಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ 15 ಪೈಸೆ ಏರಿಕೆ ಕಂಡು 44.74 ರೂಪಾಯಿಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ