ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಆರೋಗ್ಯ ಕ್ಷೇತ್ರದಲ್ಲಿ ಸಾರ್ವಜನಿಕ ಸಹಭಾಗಿತ್ವ ಅಗತ್ಯ:ಮೊಂಟೆಕ್ (Montek Singh Ahluwalia | Planning Commission | Health | public-sector | Government)
Bookmark and Share Feedback Print
 
ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವ ಅಗತ್ಯವಾಗಿದೆ. ಆದರೆ, ಹೂಡಿಕೆಗೆ ಸರಕಾರ ಪ್ರೋತ್ಸಾಹಿಸುವ ಕಾರ್ಯ ನಡೆಯಬೇಕಾಗಿದೆ ಎಂದು ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಆಹ್ಲುವಾಲಿಯಾ ಹೇಳಿದ್ದಾರೆ.

ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಟ್ಟು ಸೌಲಭ್ಯಗಳು ಕೊರತೆಯನ್ನು ಎದುರಿಸುತ್ತಿವೆ ನಿರೀಕ್ಷಿತ ಮಟ್ಟದಲ್ಲಿಲ್ಲ.ರೋಗಿಗಳ ಮತ್ತು ವೈದ್ಯರ ಅನುಪಾತದಲ್ಲಿ ಚೇತರಿಕೆ ಕಾಣುತ್ತಿಲ್ಲ. ವೈದ್ಯರು ಕೇವಲ ನಗರ ಪ್ರದೇಶಗಳತ್ತ ಗಮನಹರಿಸಿರುವುದು ವಿಷಾದದ ಸಂಗತಿಯಾಗಿದೆ ಎಂದು ಮೊಂಟೆಕ್ ತಿಳಿಸಿದ್ದಾರೆ.

ಆರೋಗ್ಯ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಉತ್ತೇಜನ ನೀಡಿದಾಗ, ಅಗತ್ಯ ಸೌಲಭ್ಯಗಳ ವಿಸ್ತರಣೆಗೆ ಸಾಧ್ಯವಾಗುತ್ತದೆ.ಆದರೆ ಸರಕಾರ ಬೃಹತ್ ಸಮೂದಾಯವನ್ನು ಗಮನದಲ್ಲಿಟ್ಟುಕೊಂಡು ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದರು.

ಆರೋಗ್ಯ ವೃತ್ತಿಪರರನ್ನು ಹೆಚ್ಚಿಸುವುದು ಮಹತ್ವದ್ದಾಗಿದೆ. ವೈದ್ಯರು ಕೂಡಾ ಹಲವು ರೀತಿಗಳಲ್ಲಿ ಸೇವೆಯನ್ನು ಒದಗಿಸುವ ಅವಶ್ಯಕತೆಯಿದೆ.ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಲು ಹೆಚ್ಚಿನ ವೈದ್ಯರ ಅಗತ್ಯತೆ ಎದುರಾಗಿದೆ ಎಂದು ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಆಹ್ಲುವಾಲಿಯಾ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ