ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » 80 ಮಿನ್‌ ಟನ್ ಕಲ್ಲಿದ್ದಲು ಅಮುದಿಗೆ ನಿರ್ಧಾರ (India | Government | Fiscal | Import | Coal)
Bookmark and Share Feedback Print
 
ಕೇಂದ್ರ ಸರಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲಿ 70 ಮಿಲಿಯನ್‌ನಿಂದ 80 ಮಿಲಿಯನ್ ಟನ್‌ ಕಲ್ಲಿದ್ದಲು ಅಮುದು ಮಾಡಿಕೊಳ್ಳುವ ಗುರಿಯನ್ನು ಹೊಂದಲಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ಪ್ರಸಕ್ತ ಏಪ್ರಿಲ್ ತಿಂಗಳ ಅವಧಿಯಿಂದ ಅಮುದು ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಕಲ್ಲಿದ್ದಲು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅಲೋಕ್ ಪೆರ್ತಿ ತಿಳಿಸಿದ್ದಾರೆ.

ಸರಕಾರಿ ಸ್ವಾಮ್ಯದ ಕೋಲ್ ಇಂಡಿಯಾ ಲಿಮಿಟೆಡ್‌ ಆರಂಭಿಕ ಶೇರುಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ.ಅಗಸ್ಟ್ ತಿಂಗಳವರೆಗೆ ಪ್ರಕ್ರಿಯೆ ಅಂತ್ಯಗೊಳ್ಳಲಿದೆ ಎಂದು ಹೇಳಿದ್ದಾರೆ.

ಕೋಲ್ ಇಂಡಿಯಾದ ಶೇ.10 ರಷ್ಟು ಶೇರುಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದ್ದು, 120 ಬಿಲಿಯನ್ ರೂಪಾಯಿಗಳನ್ನು ಸಂಗ್ರಹಿಸಲು ಯೋಜನೆಯನ್ನು ರೂಪಿಸಲಾಗಿದೆ ಎಂದು ಕಲ್ಲಿದ್ದಲು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅಲೋಕ್ ಪೆರ್ತಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸರಕಾರ, ಕಲ್ಲಿದ್ದಲು, ಅಮುದು