ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ (Indian rupee|Foreign Exchange market | Forex)
Bookmark and Share Feedback Print
 
ಮಾರುಕಟ್ಟೆಯಲ್ಲಿ ನಿರಂತರ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ, ದೇಶಿಯ ಮಾರುಕಟ್ಟೆಯಲ್ಲಿ 19 ತಿಂಗಳ ಗರಿಷ್ಠ ಏರಿಕೆ ಕಂಡು ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 12 ಪೈಸೆ ಏರಿಕೆಯಾಗಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ 1ಪೈಸೆ ಕುಸಿತ ಕಂಡು 44.45/46 ರೂಪಾಯಿಗಳಿಗೆ ತಲುಪಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ 12 ಪೈಸೆ ಏರಿಕೆ ಕಂಡು 44.33 ರೂಪಾಯಿಗಳಿಗೆ ತಲುಪಿದೆ.

ಏಷ್ಯಾ ಮಾರುಕಟ್ಟೆಗಳ ಸ್ಥಿರ ವಹಿವಾಟಿನಿಂದಾಗಿ, ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗಿರುವುದು ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಚೇತರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 67.03 ಪಾಯಿಂಟ್‌ಗಳ ಏರಿಕೆ ಕಂಡು 18,008.40 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ