ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » 61,000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ:ಶಿಂಧೆ (Sushilkumar Shinde | Electricity | Power | Five-year plan)
Bookmark and Share Feedback Print
 
12ನೇ ಪಂಚವಾರ್ಷಿಕ ಯೋಜನೆಯ ಅವಧಿಯಲ್ಲಿ ಹೆಚ್ಚುವರಿ 61,000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿಯನ್ನು ಹೊಂದಲಾಗಿದೆ ಎಂದು ಕೇಂದ್ರ ವಿದ್ಯುತ್ ಖಾತೆ ಸಚಿವ ಸುಶೀಲ್‌ ಕುಮಾರ್ ಶಿಂಧೆ ಹೇಳಿದ್ದಾರೆ.

ಯೋಜನೆಯ ಆರಂಭದಲ್ಲಿ 78,700 ಮೆಗಾ ವ್ಯಾಟ್‌ ವಿದ್ಯುತ್ ಉತ್ಪಾದನೆಯ ಗುರಿಯನ್ನು ಹೊಂದಲಾಗಿತ್ತು. ಆದರೆ ಕೆಲ ಅಡೆತಡೆಗಳಿಂದಾಗಿ 61,000 ಮೆಗಾ ವ್ಯಾಟ್ ಹೆಚ್ಚುವರಿ ವಿದ್ಯುತ್ ಉತ್ಪಾದನೆಯ ಗುರಿಯನ್ನು ಹೊಂದಲಾಗಿದೆ ಎಂದು ಸಚಿವ ಶಿಂಧೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪಂಚವಾರ್ಷಿಕ ಯೋಜನೆಯ ಆರಂಭಿಕ ಮೂರು ವರ್ಷಗಳಲ್ಲಿ 21,000 ಮೆಗಾ ವ್ಯಾಟ್‌ ಹೆಚ್ಚುವರಿ ವಿದ್ಯುತ್ ಉತ್ಪಾದಿಸಲಾಗಿದೆ. ಮುಂಬರುವ ಎರಡು ವರ್ಷಗಳಲ್ಲಿ 40,000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರಕಾರ ಮೂಲಸೌಕರ್ಯ ಹಾಗೂ ಸಮಾಜಿಕ ಕ್ಷೇತ್ರಗಳ ಯೋಜನೆಗಳ ಮುಕ್ತಾಯಕ್ಕೆ ಐದು ವರ್ಷಗಳ ಗಡುವು ನೀಡಿದೆ ಎಂದು ವಿದ್ಯುತ್ ಖಾತೆ ಸಚಿವ ಸುಶೀಲ್ ಕುಮಾರ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ