ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ರೂಪಾಯಿ ಸಮತೋಲನಕ್ಕೆ ಆರ್‌ಬಿಐ ಕ್ರಮ:ಬಸು (Central bank | RBI | Rupee)
Bookmark and Share Feedback Print
 
ರೂಪಾಯಿ ಮೌಲ್ಯದ ಸಮತೋಲನ ಕಾಪಾಡಿಕೊಳ್ಳಲು ಭಾರತೀಯ ರಿಸರ್ವ್ ಬ್ಯಾಂಕ್ ಮಧ್ಯಸ್ಥಿಕೆ ವಹಿಸುವ ಸಾಧ್ಯತೆಗಳಿವೆ ಎಂದು ಭಾರತದ ಮುಖ್ಯ ಆರ್ಥಿಕ ಸಲಹೆಗಾರ ಕೌಶಿಕ್ ಬಸು ಹೇಳಿದ್ದಾರೆ.

ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ ನಿರಂತರ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ, ಆರ್‌ಬಿಐ ಸೂಕ್ತ ಕ್ರಮಗಳಿಂದ ನಿಯಂತ್ರಿಸಲಿದೆ ಎಂದು ಕೌಶಿಕ್ ಬಸು ತಿಳಿಸಿದ್ದಾರೆ.

ಕಳೆದ ಒಂದು ವರ್ಷದ ಅವಧಿಯಲ್ಲಿ ಭಾರತದ ಕರೆನ್ಸಿ ರೂಪಾಯಿ ಶೇ.10ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಮಾರುಕಟ್ಟೆಯಲ್ಲಿ ನಿರಂತರ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ, ದೇಶಿಯ ಮಾರುಕಟ್ಟೆಯಲ್ಲಿ 19 ತಿಂಗಳ ಗರಿಷ್ಠ ಏರಿಕೆ ಕಂಡು ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 12 ಪೈಸೆ ಏರಿಕೆಯಾಗಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ 1ಪೈಸೆ ಕುಸಿತ ಕಂಡು 44.45/46 ರೂಪಾಯಿಗಳಿಗೆ ತಲುಪಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ 12 ಪೈಸೆ ಏರಿಕೆ ಕಂಡು 44.33 ರೂಪಾಯಿಗಳಿಗೆ ತಲುಪಿದೆ.

ಏಷ್ಯಾ ಮಾರುಕಟ್ಟೆಗಳ ಸ್ಥಿರ ವಹಿವಾಟಿನಿಂದಾಗಿ, ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗಿರುವುದು ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಚೇತರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ