ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಬೆಲೆ ನಿಯಂತ್ರಣ: ಪ್ರಧಾನಿಯಿಂದ ಮುಖ್ಯಮಂತ್ರಿಗಳ ವಿಶೇಷ ಸಮಿತಿ (Price Rise | Manamohan Singh)
Bookmark and Share Feedback Print
 
ಆಹಾರ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಗುರುವಾರ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ್ದು, ಮೂರು ಕೋರ್ ಗ್ರೂಪ್ ರಚಿಸಲಾಗಿದೆ.

ಹರಿಯಾಣ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ನೇತೃತ್ವದ ತಂಡ ಆಹಾರ ಉತ್ಪಾದನೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಿದ್ದು, ಈ ತಂಡದಲ್ಲಿ ಪಂಜಾಬ್, ಪಶ್ಚಿಮ ಬಂಗಾಳ, ಬಿಹಾರದ ಮುಖ್ಯಮಂತ್ರಿಗಳಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ನೇತೃತ್ವದ ತಂಡ ಗ್ರಾಹಕ ವ್ಯವಹಾರಗಳ ಬಗ್ಗೆ ಗಮನ ಹರಿಸಲಿದೆ. ಈ ತಂಡದಲ್ಲಿ ಆಂಧ್ರ, ಮಹಾರಾಷ್ಟ್ರ ಹಾಗೂ ತಮಿಳುನಾಡು ಮುಖ್ಯಮಂತ್ರಿಗಳಿದ್ದಾರೆ.

ಈ ಕೋರ್ ಗ್ರೂಪ್‌ಗಳು ಆಹಾರ ಉತ್ಪಾದನೆ, ಗ್ರಾಹಕ ವ್ಯವಹಾರಗಳು ಹಾಗೂ ಆಹಾರ ವಿತರಣೆ ವ್ಯವಸ್ಥೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿವೆ. ಈ ಕೋರ್ ಗ್ರೂಪ್‌ಗಳು ಇನ್ನೆರಡು ತಿಂಗಳೊಳಗೆ ಪ್ರಧಾನಮಂತ್ರಿಗಳಿಗೆ ವರದಿ ನೀಡಬೇಕಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬೆಲೆ ಏರಿಕೆ, ಮನಮೋಹನ್ ಸಿಂಗ್