ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಭಾರತದ ಕಾರು ರಫ್ತು ವಹಿವಾಟಿನಲ್ಲಿ ಶೇ.33ರಷ್ಟು ಹೆಚ್ಚಳ (Global | Auto markets | Car exports | India | growth)
Bookmark and Share Feedback Print
 
ಜಾಗತಿಕ ವಾಹನೋದ್ಯಮ ಕ್ಷೇತ್ರದಲ್ಲಿ ಭಾರತೀಯ ಕಂಪೆನಿಗಳ ರಫ್ತು ವಹಿವಾಟಿನಲ್ಲಿ ಶೇ.33.23ರಷ್ಟು ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಸೂಸೈಟಿ ಆಫ್ ಇಂಡಿಯನ್ ಅಟೋಮೊಬೈಲ್ ಮ್ಯಾನುಫ್ಯಾಕ್ಚುರರ್ಸ್‌(ಸಿಯಾಮ್) ಪ್ರಕಾರ, ದೇಶಿಯ ಕಾರುಗಳ ರಫ್ತು ವಹಿವಾಟು 4,41,710 ತಲುಪಿದೆ. ಕಳೆದ ವರ್ಷದ ಅವಧಿಯಲ್ಲಿ 3,31,535 ವಾಹನಗಳನ್ನು ರಫ್ತು ಮಾಡಲಾಗಿತ್ತು.

ಯುರೋಪಿಯನ್ ರಾಷ್ಟ್ರಗಳಲ್ಲಿ ಸಣ್ಣ ಕಾರುಗಳ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ಗ್ರಾಹಕರಿಂದ ಕಾರು ಬೇಡಿಕೆಯಲ್ಲಿ ಏರಿಕೆಯಾಗಿದೆ ಎಂದು ಸಿಯಾಮ್ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಹುಂಡೈ ಮೋಟಾರ್ ಇಂಡಿಯಾ ಕಂಪೆನಿಯ ಕಾರುಗಳ ರಫ್ತು ವಹಿವಾಟಿನಲ್ಲಿ ಶೇ.12.75ರಷ್ಟು ಏರಿಕೆಯಾಗಿ 2,85,658 ಕಾರುಗಳನ್ನು ರಫ್ತು ಮಾಡಲಾಗಿದೆ. ಕಳೆದ ವರ್ಷದ ಅವಧಿಯಲ್ಲಿ 2,53,344 ವಾಹನಗಳನ್ನು ರಫ್ತು ಮಾಡಲಾಗಿತ್ತು.
ಸಂಬಂಧಿತ ಮಾಹಿತಿ ಹುಡುಕಿ