ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Rupee|Sensex| Dollar)
Bookmark and Share Feedback Print
 
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಚೇತರಿಕೆ ಹಾಗೂ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 15 ಪೈಸೆ ಕುಸಿತ ಕಂಡಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 18 ಪೈಸೆ ಕುಸಿತ ಕಂಡು 44.46/47 ರೂಪಾಯಿಗಳಿಗೆ ತಲುಪಿತ್ತು.ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 15 ಪೈಸೆ ಕುಸಿತ ಕಂಡಿದೆ.

ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಚೇತರಿಕೆ ಹಾಗೂ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳದಿಂದಾಗಿ, ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಫಾರೆಕ್ಸ್ ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 78.21 ಪಾಯಿಂಟ್‌ಗಳ ಕುಸಿತ ಕಂಡು 17,774.79 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ, ಸೆನ್ಸೆಕ್ಸ್, ಡಾಲರ್