ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ (Rupee | Dollar | Forex)
Bookmark and Share Feedback Print
 
ಶೇರುಪೇಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 23ಪೈಸೆ ಏರಿಕೆ ಕಂಡು 44.25 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂುಪಾಯಿ 2ಪೈಸೆ ಕುಸಿತ ಕಂಡು 44.48/49 ರೂಪಾಯಿಗಳಿಗೆ ತಲುಪಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ 23ಪೈಸೆ ಏರಿಕೆ ಕಂಡು 44.25ರೂಪಾಯಿಗಳಿಗೆ ತಲುಪಿದೆ.

ಬ್ಯಾಂಕ್‌ಗಳಿಂದ ಡಾಲರ್‌ಗಳ ಮಾರಾಟ ಹಾಗೂ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ, ರೂಪಾಯಿ ಮೌಲ್ಯದ ಚೇತರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 153.61 ಪಾಯಿಂಟ್‌ಗಳ ಏರಿಕೆ ಕಂಡು 17,975 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ, ಡಾಲರ್, ಫಾರೆಕ್ಸ್