ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಇಂಧನ ಮಾರಾಟದಲ್ಲಿ ಶೇ.63ರಷ್ಟು ಹೆಚ್ಚಳ (IOC | Bharat Petroleum | Hindustan Petroleum | Fuel sales)
Bookmark and Share Feedback Print
 
ಪ್ರಸಕ್ತ ವರ್ಷದ ಅವಧಿಯ ತೈಲ ಮಾರಾಟದಲ್ಲಿ ಶೇ.63ರಷ್ಟು ಹೆಚ್ಚಳವಾಗಿದ್ದರಿಂದ, ಸರಕಾರಿ ಸ್ವಾಮ್ಯದ ತೈಲ ಕಂಪೆನಿಗಳು ವಾರ್ಷಿಕವಾಗಿ 42,540 ಕೋಟಿ ರೂಪಾಯಿಗಳ ನಷ್ಟ ಅನುಭವಿಸುವ ಸಾಧ್ಯತೆಗಳಿವೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.

ಸರಕಾರಿ ಸ್ವಾಮ್ಯದ ತೈಲ ಕಂಪೆನಿಗಳು ಪ್ರಸ್ತುತ 79,000 ಕೋಟಿ ರೂಪಾಯಿಗಳ ನಷ್ಟವನ್ನು ಮರುಗಳಿಕೆಯ ಯತ್ನದಲ್ಲಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೋರೇಶನ್‌ನ ನಿರ್ದೇಶಕ ಎಸ್‌ವಿ.ನರಸಿಂಹನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

2009-10ರ ಸಾಲಿನಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಶನ್,ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ಸೀಮೆಎಣ್ಣೆಯನ್ನು ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿರುವುದರಿಂದ 26,000 ಕೋಟಿ ರೂಪಾಯಿ ನಷ್ಟ ಅನುಭವಿಸಿತ್ತು. ಆದರೆ ಪ್ರಸಕ್ತ ವರ್ಧ ಅವಧಿಯಲ್ಲಿ 42,540 ಕೋಟಿ ರೂಪಾಯಿಗಳ ನಿವ್ವಳ ನಷ್ಟ ಅನುಭವಿಸುವ ಸಾಧ್ಯತೆಗಳಿವೆ ಎಂದು ಐಒಸಿ ಮೂಲಗಳು ತಿಳಿಸಿವೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪ್ರಸ್ತುತ ತೈಲ ದರಗಳಿಂದಾಗಿ ಐಒಸಿ, ಭಾರತ್ ಪೆಟ್ರೋಲಿಯಂ ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಕಂಪೆನಿಗಳು ಒಟ್ಟು 79,670 ಕೋಟಿ ರೂಪಾಯಿಗಳ ನಷ್ಟ ಅನುಭವಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ