ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Rupee | Dollar | Forex)
Bookmark and Share Feedback Print
 
ಸಾಗರೋತ್ತರ ಮಾರುಕಟ್ಟೆಯಲ್ಲಿ ಡಾಲರ್ ಚೇತರಿಕೆ ಹಾಗೂ ವಿದೇಶಿ ಬಂಡವಾಳದ ಹೊರಹರಿವಿನ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 12 ಪೈಸೆ ಏರಿಕೆ ಕಂಡು 44.55 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 5 ಪೈಸೆ ಏರಿಕೆ ಕಂಡು 44.43/44 ರೂಪಾಯಿಗಳಿಗೆ ತಲುಪಿತ್ತು.ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ 12ಪೈಸೆ ಕುಸಿತ ಕಂಡು 44.55 ರೂಪಾಯಿಗಳಿಗೆ ತಲುಪಿದೆ.

ಸಾಗರೋತ್ತರ ಮಾರುಕಟ್ಟೆಯಲ್ಲಿ ಡಾಲರ್ ಚೇತರಿಕೆ ಹಾಗೂ ವಿದೇಶಿ ಬಂಡವಾಳದ ಹೊರಹರಿವು, ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಫಾರೆಕ್ಸ್ ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 89.68 ಪಾಯಿಂಟ್‌ಗಳ ಕುಸಿತ ಕಂಡು 17,549.58 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ ಡಾಲರ್, ಫಾರೆಕ್ಸ್