ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಆರ್ಥಿಕ ವೃದ್ಧಿ ದರ ಶೇ.8.4ಕ್ಕೆ ತಲುಲಪಿದೆ:ಎಫ್‌ಐಸಿಸಿಐ (FICCI | GDP | Survey | Pranab Mukherjee)
Bookmark and Share Feedback Print
 
ಪ್ರಸಕ್ತ ಆರ್ಥಿಕ ವರ್ಷದ ಸಾಲಿನಲ್ಲಿ ಕೃಷಿ ಕ್ಷೇತ್ರ ಚೇತರಿಕೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ, ದೇಶದ ಆರ್ಥಿಕ ವೃದ್ಧಿ ದರ ಶೇ.8.4ಕ್ಕೆ ತಲುಪುವ ಸಾಧ್ಯತೆಗಳಿವೆ ಎಂದು ಎಫ್‌ಐಸಿಸಿಐ ತಜ್ಞರು ತಿಳಿಸಿದ್ದಾರೆ.

ಆರ್ಥಿಕ ತಜ್ಞರ ಪ್ರಕಾರ 2010-11ರ ಅವಧಿಯಲ್ಲಿ ಕೃಷಿ ಕ್ಷೇತ್ರ ಹಾಗೂ ಇತರ ಸೇವಾ ಕ್ಷೇತ್ರಗಳು ಶೇ.4 ರಷ್ಟು ಚೇತರಿಕೆ ಕಾಣಲಿದೆ ಎಂದು ಅಧ್ಯಯನ ವರದಿಯಲ್ಲಿ ಬಹಿರಂಗಪಡಿಸಿದ್ದಾರೆ.

2009-10ರಲ್ಲಿ ಶೇ.10ರಷ್ಟು ಚೇತರಿಕೆ ಕಂಡಿದ್ದ ಕೈಗಾರಿಕೆ ವೃದ್ಧಿ, ಪ್ರಸಕ್ತ ವರ್ಷದ ಆರ್ಥಿಕ ಸಾಲಿನಲ್ಲಿ ಶೇ.9.2ಕ್ಕೆ ಕುಸಿಯುವ ಸಾಧ್ಯತೆಗಳಿವೆ ಎಂದು ಎಫ್‌ಐಸಿಸಿಐ ಮೂಲಗಳು ತಿಳಿಸಿವೆ.

ಕೇಂದ್ರದ ವಿತ್ತಖಾತೆ ಸಚಿವ ಪ್ರಣಬ್ ಮುಖರ್ಜಿ, ಆರ್ಥಿಕ ವೃದ್ಧಿ ದರ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶೇ.8.75ಕ್ಕೆ ತಲುಪುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ