ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ (Rupee | Dollar | Forex | Market)
Bookmark and Share Feedback Print
 
ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 16 ಪೈಸೆ ಏರಿಕೆ ಕಂಡು 44.57 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 41 ಪೈಸೆ ಕುಸಿತ ಕಂಡು 44.73/74 ರೂಪಾಯಿಗಳಿಗೆ ತಲುಪಿದೆ. ಆದರೆ ಿಂದಿನ ಆರಂಭಿಕ ವಹಿವಾಟಿನಲ್ಲಿ 16 ಪೈಸೆ ಏರಿಕೆ ಕಂಡು 44.57 ರೂಪಾಯಿಗಳಿಗೆ ತಲುಪಿದೆ.

ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳ ಹಾಗೂ ರಿಸರ್ವ್ ಬ್ಯಾಂಕ್‌ನ ಆರ್ಥಿಕ ಪರಿಷ್ಕರಣೆಯಿಂದಾಗಿ ಬ್ಯಾಂಕ್‌ಗಳಿಂದ ಡಾಲರ್‌ಗಳ ಮಾರಾಟದಲ್ಲಿ ಹೆಚ್ಚಳವಾಗಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆ ಕಂಡಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ 94.36 ಪಾಯಿಂಟ್‌ಗಳ ಏರಿಕೆ ಕಂಡು17,495.04 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ