ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಟಿಸಿಎಸ್‌ಗೆ ಶೀಘ್ರದಲ್ಲಿ 38 ಸಾವಿರ ಉದ್ಯೋಗಿಗಳ ನೇಮಕ (TCS | Hire | IT major| Company)
Bookmark and Share Feedback Print
 
ಟಾಟಾ ಗ್ರೂಪ್ ಕಂಪೆನಿ ಮತ್ತು ದೇಶದ ಸಾಫ್ಟ್‌ವೇರ್ ರಫ್ತು ಸೇವೆಯಲ್ಲಿ ಮುಂಚೂಣಿಯಲ್ಲಿರುವ ಟಾಟಾ ಕನ್ಸಲ್‌ಟನ್ಸಿ ಸರ್ವಿಸಸ್,ಅಗತ್ಯವಾದ 38 ಸಾವಿರ ಉದ್ಯೋಗಿಗಳನ್ನು ಶೀಘ್ರದಲ್ಲಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಕಂಪೆನಿಯ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟು 38 ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು,ಅದರಲ್ಲಿ 20 ಸಾವಿರ ಉದ್ಯೋಗಿಗಳನ್ನು ತರಬೇತುದಾರರಾಗಿ ಹಾಗೂ 10 ಸಾವಿರ ಖಾಯಂ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಟಿಸಿಎಸ್ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಜೊಯ್ ಮುಖರ್ಜಿ ತಿಳಿಸಿದ್ದಾರೆ.

ಕಂಪೆನಿ ಬ್ರೆಜಿಲ್, ಉರುಗ್ವೆ, ಚೀನಾ, ಪೊಲ್ಯಾಂಡ್ ಮತ್ತು ಲ್ಯಾಟಿನ್ ಅಮೆರಿಕ ಸೇರಿದಂತೆ ಇತರ ರಾಷ್ಟ್ರಗಳಲ್ಲಿ, ಸ್ಥಳೀಯ 3 ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವ ಯೋಜನೆಯನ್ನು ಹೊಂದಲಾಗಿದೆ ಎಂದು ಹೇಳಿದ್ದಾರೆ.

ಕಳೆದ ವರ್ಷದ ಆರ್ಥಿಕ ಸಾಲಿನಲ್ಲಿ ಕಂಪೆನಿಯ ಕ್ರೂಢೀಕೃತ ನಿವ್ವಳ ಲಾಭದಲ್ಲಿ ಶೇ.33.19ರಷ್ಟು ಏರಿಕೆಯಾಗಿ 7,000.64ಕೋಟಿ ರೂಪಾಯಿಗಳಿಗೆ ತಲುಪಿದೆ.ನಿವ್ವಳ ಆದಾಯದಲ್ಲಿ ಶೇ.8ರಷ್ಟು ಏರಿಕೆಯಾಗಿ 30,028.92 ಕೋಟಿ ರೂಪಾಯಿಗಳಿಗೆ ತಲುಪಿದೆ ಎಂದು ಅಜೊಯ್ ಮುಖರ್ಜಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ