ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ಡಾಲರ್ ಎದುರಿಗೆ ರೂಪಾಯಿ ಚೇತರಿಕೆ (Dollar | Rupee | Foreign funds | Forex | inflows)
Bookmark and Share Feedback Print
 
ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 14 ಪೈಸೆ ಏರಿಕೆ ಕಂಡು 44.38 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 21 ಪೈಸೆ ಏರಿಕೆ ಕಂಡು 44.52/53 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ 14 ಪೈಸೆ ಏರಿಕೆ ಕಂಡು 44.38 ರೂಪಾಯಿಗಳಿಗೆ ತಲುಪಿದೆ.

ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳ ಹಾಗೂ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಿಂದಾಗಿ, ರೂಪಾಯಿ ಮೌಲ್ಯ ಏರಿಕೆಗೆ ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 94.97 ಪಾಯಿಂಟ್‌ಗಳ ಏರಿಕೆ ಕಂಡು 17,555.55 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ