ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಶೀಘ್ರದಲ್ಲಿ ಬಡ್ಡಿ ದರ ಏರಿಕೆ ಸಾಧ್ಯತೆಗಳಿಲ್ಲ: ಭಟ್ (Key policy rates | Liquidity | Bankers | Loans | ICICI Bank | HDFC Bank)
Bookmark and Share Feedback Print
 
ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರಗಳಲ್ಲಿ ಶೇ.0.25ರಷ್ಟು ಹೆಚ್ಚಳಗೊಳಿಸಿರುವ ಮಧ್ಯೆಯು,ಗೃಹ, ವಾಹನೋದ್ಯಮ ಮತ್ತು ಗ್ರಾಹಕ ಸಾಲಗಳ ಮೇಲಿನ ಬಡ್ಡಿ ದರಗಳು ಶೀಘ್ರದಲ್ಲಿ ಹೆಚ್ಚಳ ಮಾಡುವ ಸಾಧ್ಯತೆಗಳಿಲ್ಲ ಎಂದು ಬ್ಯಾಂಕಿಂಗ್‌ ಕ್ಷೇತ್ರದ ಮುಖ್ಯಸ್ಥರು ಹೇಳಿದ್ದಾರೆ.

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ, ಐಸಿಐಸಿಐ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್, ಯುನಿಯನ್ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ಸೇರಿದಂತೆ ಇತರ ಬ್ಯಾಂಕ್‌ಗಳು ಕೂಡಾ ಬಡ್ಡಿ ದರಗಳಲ್ಲಿ ಹೆಚ್ಚಳ ಘೋಷಿಸಲು ನಿರಾಕರಿಸಿವೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೋ ದರಗಳಲ್ಲಿ ಹೆಚ್ಚಳಗೊಳಿಸಿದ್ದರಿಂದ ಮಾರುಕಟ್ಟೆಗಳಲ್ಲಿ ನಗದು ಹರಿವಿನ ಪ್ರಮಾಣದಲ್ಲಿ ಕುಸಿತವಾಗಲಿದೆ. ಇತರಿದಂಾಗಿ ಬೇಡಿಕೆ-ಪೂರೈಕೆ ಮಧ್ಯ ಕಂದರ ಏರ್ಪಡಲಿರುವುದರಿಂದ ಸಹಜವಾಗಿ ಮುಂಬರುವ ದಿನಗಳಲ್ಲಿ ಬಡ್ಡಿ ದರದಲ್ಲಿ ಏರಿಕೆಯಾಗಲಿದೆ ಎಂದು ಎಸ್‌ಬಿಐ ಮುಖ್ಯಸ್ಥ ಒ.ಪಿ.ಭಟ್ ಹೇಳಿದ್ದಾರೆ.

ಅಹಾರ ಹಾಗೂ ಇಂಧನ ದರಗಳಲ್ಲಿ ಏರಿಕೆಯಾಗಿದ್ದರಿಂದ, ವಾರ್ಷಿಕ ಹಣದುಬ್ಬರ ದರ ಮಾರ್ಚ್ ತಿಂಗಳ ಅಂತ್ಯಕ್ಕೆ ಎರಡಂಕಿಗೆ ತಲುಪಿದ ಕಳವಳದಿಂದಾಗಿ ಹಣದುಬ್ಬರ ನಿಯಂತ್ರಿಸಲು ಆರ್‌ಬಿಐ ರೆಪೋ ದರಗಳನ್ನು ಹೆಚ್ಚಿಸಿದೆ ಎಂದು ಭಟ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ