ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Rupee | Dollar | US currency | Sensex)
Bookmark and Share Feedback Print
 
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದಲ್ಲಿ ಚೇತರಿಕೆಯಾಗಿದ್ದರಿಂದ,ಡಾಲರ್ ಎದುರಿಗೆ 3ಪೈಸೆ ಕುಸಿತ ಕಂಡು 44.52 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 3 ಪೈಸೆ ಕುಸಿತ ಕಂಡು 44.55/56 ರೂಪಾಯಿಗಳಿಗೆ ತಲುಪಿತ್ತು.ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ಮತ್ತೆ 3ಪೈಸೆ ಕುಸಿತ ಕಂಡು 44.52 ರೂಪಾಯಿಗಳಿಗೆ ತಲುಪಿದೆ.

ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 59.50 ಪಾಯಿಂಟ್‌ಗಳ ಕುಸಿತ ಕಂಡು 17,422.53 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ