ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Rupee | Dollar | Forex | Market)
Bookmark and Share Feedback Print
 
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯ ಚೇತರಿಕೆಯಾಗಿದ್ದರಿಂದ,ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 1 ಪೈಸೆ ಕುಸಿತವಾಗಿ 44.55 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 1 ಪೈಸೆ ಏರಿಕೆ ಕಂಡು 44.54/55 ರೂಪಾಯಿಗಳಿಗೆ ತಲುಪಿತ್ತು.ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ 1ಪೈಸೆ ಕುಸಿತ ಕಂಡು 44.55 ರೂಪಾಯಿಗಳಿಗೆ ತಲುಪಿದೆ.

ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯ ಚೇತರಿಕೆ ಹಾಗೂ ಮಾರುಕಟ್ಟೆಗಳಿಂದ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾಗಿದ್ದರಿಂದ ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 119.13 ಪಾಯಿಂಟ್‌ಗಳ ಏರಿಕೆ ಕಂಡು 17,693.12 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ