ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ವಿಪ್ರೋಗೆ 1,209 ಕೋಟಿ ರೂಪಾಯಿ ನಿವ್ವಳ ಲಾಭ (Wipro | Net profit | Fourth quarter | Stock Exchange | Azim Premji)
Bookmark and Share Feedback Print
 
ದೇಶದ ಸಾಫ್ಟ್‌ವೇರ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ವಿಪ್ರೋ ಸಂಸ್ಥೆ, ಮಾರ್ಚ್‌ಗೆ ನಾಲ್ಕನೇ ತ್ರೈಮಾಸಿಕ ಅಂತ್ಯಗೊಂಡಂತೆ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಕ್ರೂಢೀಕೃತ ನಿವ್ವಳ ಲಾಭದಲ್ಲಿ ಶೇ.20.77ರಷ್ಟು ಏರಿಕೆಯಾಗಿ 1.209 ಕೋಟಿ ರೂಪಾಯಿಗಳಿಗೆ ತಲುಪಿದೆ.

2010ರ ಮಾರ್ಚ್ 31ಕ್ಕೆ ಅಂತ್ಯಗೊಂಡಂತೆ ನಿವ್ವಳ ಆದಾಯ 6,982 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ. ಕಳೆದ ವರ್ಷದ ಅವಧಿಯಲ್ಲಿ 6451.4 ಕೋಟಿ ರೂಪಾಯಿಗಳಾಗಿತ್ತು ಎಂದು ವಿಪ್ರೋ ಸಂಸ್ಥೆ ಮುಂಬೈ ಶೇರುಪೇಟೆಗೆ ಸಲ್ಲಿಸಿದ ಮಾಹಿತಿಯಲ್ಲಿ ಬಹಿರಂಗಪಡಿಸಿದೆ.

ಸಾಫ್ಟ್‌ವೇರ್ ವಹಿವಾಟು ಸಾಮಾನ್ಯ ಸ್ಥಿತಿಗೆ ಮರಳುತ್ತಿದ್ದು, ಮುಂಬರುವ ದಿನಗಳಲ್ಲಿ ಸಂಪೂರ್ಣ ಚೇತರಿಕೆಯಾಗುವ ವಿಶ್ವಾಸವಿದೆ ಎಂದು ವಿಪ್ರೋ ಸಂಸ್ಥೆಯ ಮುಖ್ಯಸ್ಥ ಅಜೀಂ ಪ್ರೇಮ್‌ಜಿ ಹೇಳಿದ್ದಾರೆ.

2010ರ ಮಾರ್ಚ್ 31ಕ್ಕೆ ವರ್ಷಾಂತ್ಯಗೊಂಡಂತೆ ಕಂಪೆನಿಯ ಕ್ರೂಢೀಕೃತ ನಿವ್ವಳ ಲಾಭದಲ್ಲಿ, ಶೇ.18.49ರಷ್ಟು ಏರಿಕೆಯಾಗಿ 4,593 ಕೋಟಿ ರೂಪಾಯಿಗಳಿಗೆ ತಲುಪಿದೆ ಎಂದು ಪ್ರೇಮ್‌ಜಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ