ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ರಿಲಯನ್ಸ್ ಇಂಡಸ್ಟ್ರೀಸ್‌ಗೆ 4,710 ಕೋಟಿ ರೂ ಲಾಭ (Reliance Industries | Net profit | Turnover | Private sector)
Bookmark and Share Feedback Print
 
ರಿಲಯನ್ಸ್ ಇಂಡಸ್ಟ್ರೀಸ್ ಜನೆವರಿಯಿಂದ ಮಾರ್ಚ್ ತಿಂಗಳ ಅವಧಿಯ ನಿವ್ವಳ ಲಾಭದಲ್ಲಿ ಶೇ.30ರಷ್ಟು ಹೆಚ್ಚಳವಾಗಿ, 4,710 ಕೋಟಿ ರೂಪಾಯಿಗಳಿಗೆ ತಲುಪಿದೆ. ಏತನ್ಮಧ್ಯೆ, ಕಂಪೆನಿಯ ವಾರ್ಷಿಕ ವಹಿವಾಟು 2 ಲಕ್ಷ ಕೋಟಿ ರೂಪಾಯಿಗಳನ್ನು ದಾಟಿದೆ ಎಂದು ಮೂಲಗಳು ತಿಳಿಸಿವೆ.

ದೇಶದ ಖಾಸಗಿ ಕ್ಷೇತ್ರದ ಬೃಹತ್ ಕಂಪೆನಿಯಾದ ರಿಲಯನ್ಸ್ ಇಂಡಸ್ಟ್ರೀಸ್‌ನ, ವಾರ್ಷಿಕ ನಿವ್ವಳ ಲಾಭದಲ್ಲಿ ಶೇ.4ರಷ್ಟು ಏರಿಕೆಯಾಗಿದ್ದು 15,898 ಕೋಟಿ ರೂಪಾಯಿಗಳಿಗೆ ತಲುಪಿದೆ. ಕಳೆದ ವರ್ಷದ ಅವಧಿಯಲ್ಲಿ 15,296 ಕೋಟಿ ರೂ ನಿವ್ವಳ ಲಾಭವಾಗಿತ್ತು.

ಕಂಪೆನಿಯ 2008-09ರ ವಾರ್ಷಿಕ ಆದಾಯ ಅಥವಾ ವಹಿವಾಟಿನಲ್ಲಿ, ಶೇ.35ರಷ್ಟು ಹೆಚ್ಚಳವಾಗಿ 1,53,138 ಕೋಟಿ ರೂಪಾಯಿಗಳಾಗಿತ್ತು. ಆದರೆ ಪ್ರಸಕ್ತ ವರ್ಷದ ಅವಧಿಯಲ್ಲಿ 2,05,926 ಕೋಟಿ ರೂಪಾಯಿಗಳಿಗೆ ತಲುಪಿದೆ.

ನಾಲ್ಕನೇ ತ್ರೈಮಾಸಿಕ ಅವಧಿಯ ನಿವ್ವಳ ಲಾಭ 4,710 ಕೋಟಿ ರೂಪಾಯಿಗಳಿಗೆ ತಲುಪಿದೆ. ಕಳೆದ ವರ್ಷದ ಅವಧಿಯಲ್ಲಿ 3,627 ಕೋಟಿ ರೂಪಾಯಿಗಳಾಗಿತ್ತು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಅಡಳಿತ ಮಂಡಳಿ, ಶೇರುದಾರರ ತಲಾ 10 ರೂಪಾಯಿ ಶೇರಿಗೆ 7 ರೂಪಾಯಿ ಡೆವಿಡೆಂಡ್ ಘೋಷಿಸಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ