ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಐಸಿಐಸಿಐ ಬ್ಯಾಂಕ್‌ ನಿವ್ವಳ ಲಾಭದಲ್ಲಿ ಶೇ.35ರಷ್ಟು ಏರಿಕೆ (ICICI Bank | Quarterly profit | Bad loans | Rise | Market)
Bookmark and Share Feedback Print
 
ದೇಶದ ಖಾಸಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಎರಡನೇ ಸ್ಥಾನದಲ್ಲಿರುವ ಐಸಿಐಸಿಐ ಬ್ಯಾಂಕ್, ನಾಲ್ಕನೇ ತ್ರೈಮಾಸಿಕ ಅವಧಿಯ ನಿವ್ವಳ ಲಾಭದಲ್ಲಿ ಶೇ.35ರಷ್ಟು ಏರಿಕೆಯಾಗಿ 10.06 ಬಿಲಿಯನ್ ರೂಪಾಯಿಗಳಿಗೆ ತಲುಪಿದೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.

ಜನೆವರಿ-ಮಾರ್ಚ್ ತಿಂಗಳ ಅವಧಿಯ ನಿವ್ವಳ ಲಾಭ 10.06 ಬಿಲಿಯನ್ ರೂಪಾಯಿಗಳಿಗೆ ತಲುಪಿದೆ.ಕಳೆದ ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ ನಿವ್ವಳ ಲಾಭ 7.44 ಬಿಲಿಯನ್ ರೂಪಾಯಿಗಳಿಗೆ ತಲುಪಿತ್ತು. ಕೆಲ ಆರ್ಥಿಕ ತಜ್ಞರು ಮೊದಲ ತ್ರೈಮಾಸಿಕ ಅವಧಿಯಲ್ಲಿ 10.89 ಬಿಲಿಯನ್ ರೂಪಾಯಿಗಳಷ್ಟು ನಿವ್ವಳ ಲಾಭದಲ್ಲಿ ಏರಿಕೆಯಾಗಲಿದೆ ಎಂದು ಸಮೀಕ್ಷೆಯಲ್ಲಿ ತಿಳಿಸಿದ್ದಾರೆ.

ಕಳೆದ ವರ್ಷದ ಅವಧಿಯಲ್ಲಿ ಸಾಲದ ಬೇಡಿಕೆ ಕುಸಿತಗೊಂಡಿದ್ದರಿಂದ ನಿವ್ವಳ ಲಾಭದಲ್ಲಿ ಅಲ್ಪ ಏರಿಕೆ ಕಂಡಿದೆ. ಆದರೆ 2010-11ರ ಏಪ್ರಿಲ್ ತಿಂಗಳ ನಂತರ ಕೈಗಾರಿಕೆಗಳ ವಿಸ್ತರಣೆಗೆ ಹೆಚ್ಚಿನ ಹಣಕಾಸಿನ ಅಗತ್ಯವಾಗುವುದರಿಂದ ಸಾಲ ನೀಡಿಕೆಯಲ್ಲಿ ಹೆಚ್ಚಳವಾಗಲಿದ್ದು, ಆರ್ಥಿಕತೆ ಪ್ರಸಕ್ತ ಆರ್ಥಿಕ ವರ್ಷದ ಅವಧಿಯಲ್ಲಿ ಶೇ 8ಕ್ಕೆ ತಲುಪುವ ಸಾಧ್ಯತೆಗಳಿವೆ

ಶೇರುಪೇಟೆಗಳಲ್ಲಿ ಐಸಿಐಸಿಐ ಬ್ಯಾಂಕ್ ಶೇರುಗಳು ಮೊತ್ತ 24.5 ಬಿಲಿಯನ್ ಡಾಲರ್‌ಗಳಿಗೆ ತಲುಪಿದ್ದು, ಪ್ರಸಕ್ತ ವರ್ಷದ ಅವಧಿಯಲ್ಲಿ 11.4ರಷ್ಟು ಶೇರುದರದಲ್ಲಿ ಹೆಚ್ಚಳವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ