ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Rupee|dollar|foreign funds)
Bookmark and Share Feedback Print
 
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಚೇತರಿಕೆ ಹಾಗೂ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ,ಡಾಲರ್ ಎದುರಿಗೆ ರೂಪಾಯಿ 5ಪೈಸೆ ಕುಸಿತ ಕಂಡು 44.44 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 5 ಪೈಸೆ ಕುಸಿತ ಕಂಡು 44.38/39 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ 5 ಪೈಸೆ ಕುಸಿತ ಕಂಡು 44.44 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ಬಂಡವಾಳದ ಹೊರಹರಿವು ಹಾಗೂ ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ ರೂಪಾಯಿ ಕರೆನ್ಸಿ ಒತ್ತಡಕ್ಕಿ ಸಿಲುಕಿ ಇಳಿಕೆ ಕಂಡಿದೆ ಎಂದು ಫಾರೆಕ್ಸ್ ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 61.71 ಪಾಯಿಂಟ್‌ಗಳ ಏರಿಕೆ ಕಂಡು 17,683.57 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ