ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Forex | Rupee | USD | Depreciate | Trade)
Bookmark and Share Feedback Print
 
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಚೇತರಿಕೆ ಹಾಗೂ ಮಾರುಕಟ್ಟೆಗಳಿಂದ ವಿದೇಶಿ ಬಂಡವಾಳದ ಹೊರಹರಿವಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 12 ಪೈಸೆ ಕುಸಿತ ಕಂಡು 44.56 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 6 ಪೈಸೆ ಕುಸಿತ ಕಂಡು 44.44/45 ರೂಪಾಯಿಗಳಿಗೆ ತಲುಪಿದೆ.ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 12ಪೈಸೆ ಕುಸಿತ ಕಂಡು 44.56 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ಮಾರುಕಟ್ಟೆಗಳಲ್ಲಿ ಡಾಲರ್ ಚೇತರಿಕೆ ಹಾಗೂ ಮಾರುಕಟ್ಟೆಗಳಿಂದ ವಿದೇಶಿ ಬಂಡವಾಳದ ಹೊರಹರಿವಿನಿಂದಾಗಿ, ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 229.27 ಪಾಯಿಂಟ್‌ಗಳ ಕುಸಿತ ಕಂಡು 17,461.35 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ