ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಅಮೇರಿಕದಲ್ಲಿ 2,90,000 ಹೊಸ ಉದ್ಯೋಗ ಸೃಷ್ಠಿ (US Economic Downturn | New jobs)
Bookmark and Share Feedback Print
 
ಕಳೆದ ಏಪ್ರಿಲ್ ತಿಂಗಳೊಂದರಲ್ಲೇ ಅಮೆರಿಕದಲ್ಲಿ ಸಾಕಷ್ಟು ಉದ್ಯೋಗ ಸೃಷ್ಟಿಯಾಗಿದ್ದು, 2,90,000 ಹೊಸ ಉದ್ಯೋಗಾವಕಾಶವನ್ನು ನೀಡಲಾಗಿದೆ ಎಂದು ಕಾರ್ಮಿಕ ಸಚಿವಾಲಯ ತನ್ನ ವರದಿಯಲ್ಲಿ ಹೇಳಿದೆ.

ಜಾಗತಿಕ ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಭಾರೀ ಉದ್ಯೋಗ ನಷ್ಟ ಕಂಡಿದ್ದ ಅಮೆರಿಕ ಇದೀಗ ಮತ್ತೆ ಉದ್ಯೋಗದ ಹೊಳೆಯನ್ನೇ ಹರಿಸುತ್ತಿದ್ದು, ನಿರುದ್ಯೋಗಿಗಳು ಮತ್ತೆ ಉದ್ಯೋಗ ಪಡೆದುಕೊಂಡಿದ್ದಾರೆ. ಆದರೆ ವಿಚಿತ್ರವೆಂದರೆ ಇದೇ ಸಮಯದಲ್ಲಿ ನಿರುದ್ಯೋಗಿಗಳ ಪ್ರಮಾಣವೂ ಶೇ.9.7ರಿಂದ ಶೇ.9.9ಕ್ಕೆ ಏರಿದೆ ಎಂಬುದೇ ಸೋಜಿಗದ ವಿಚಾರವಾಗಿದೆ.

ಆದರೆ ತಜ್ಞರು ಹೇಳುವ ಪ್ರಕಾರ, ಈವರೆಗೆ ಹಲವರು ಉದ್ಯೋಗ ಕಳೆದುಕೊಂಡು ಮನೆಯಲ್ಲಿದ್ದರೆ, ಎಷ್ಟೋ ಮಂದಿ ವಿದ್ಯಾಭ್ಯಾಸದ ನಂತರ ಉದ್ಯೋಗ ಪಡೆಯದೆ ಇದ್ದರು. ಈಗ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿರುವುದರಿಂದ ಒಮ್ಮಲೇ ಉದ್ಯೋಗಾಕಾಂಕ್ಷಿಗಳ ಪ್ರಮಾಣ ಏರಿಕೆಯಾಗಿದೆ ಎಂದು ಸಮರ್ಥಿಸುತ್ತಾರೆ.
ಸಂಬಂಧಿತ ಮಾಹಿತಿ ಹುಡುಕಿ