ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ನಿಗದಿತ ಅವಧಿಗೆ ಮುಂಗಾರು ಮಳೆ:ಹವಾಮಾನ ಇಲಾಖೆ (Monsoon rains | India | Meteorological)
Bookmark and Share Feedback Print
 
ಪ್ರಸಕ್ತ ವರ್ಷದಲ್ಲಿ ಮುಂಗಾರು ಮಳೆ ನಿಗದಿತ ಅವಧಿಗೆ ಬರುವ ಸಾಧ್ಯತೆಗಳಿವೆ ಎಂದು ನಗರದಲ್ಲಿರುವ ಸರಕಾರಿ ಸ್ವಾಮ್ಯದ ಹವಾಮಾನ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ದೇಶದಲ್ಲಿ ಮುಂಗಾರು ಮಳೆ ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲಿ ಆಗಮಿಸುತ್ತದೆ.ದೇಶದಲ್ಲಿ ಶೇ.60ರಷ್ಟು ಕೃಷಿ ಮುಂಗಾರು ಮಳೆಯ ಮೇಲೆ ಅವಲಂಬಿತವಾಗಿದ್ದರಿಂದ, ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಮುಂಗಾರು ಮಳೆ ದೇಶದ ಕೃಷಿಕರಿಗೆ ತುಂಬಾ ಮಹತ್ವದ್ದಾಗಿದೆ.

ಹವಾಮಾನ ಇಲಾಖೆಯ ಪ್ರಸ್ತುತ ಸಮೀಕ್ಷೆಯ ಪ್ರಕಾರ ನಿಗದಿತ ಸಮಯಕ್ಕೆ ಮುಂಗಾರು ಮಳೆ ಆಗಮಿಸಲಿದ್ದು,ಮೇ 15 ರಂ ನಂತರ ಖಚಿತವಾಗಿ ದಿನಾಂಕವನ್ನು ಘೋಷಿಸಲು ಸಾಧ್ಯವಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ