ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ (Rupee|Dollar | Forex | Foreign funds)
Bookmark and Share Feedback Print
 
ದೇಶಿಯ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 12ಪೈಸೆ ಏರಿಕೆಯಾಗಿ 45.18 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ 46 ಪೈಸೆ ಕುಸಿತ ಕಂಡು 45.30/31ರೂಪಾಯಿಗಳಿಗೆ ತಲುಪಿತ್ತು.ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 12ಪೈಸೆ ಏರಿಕೆಯಾಗಿ 45.18 ರೂಪಾಯಿಗಳಿಗೆ ತಲುಪಿದೆ.

ಬ್ಯಾಂಕ್‌ಗಳಿಂದ ಡಾಲರ್‌ಗಳ ಮಾರಾಟ ಹಾಗೂ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಚೇತರಿಸಿಕೊಂಡಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 55.65 ಪಾಯಿಂಟ್‌ಗಳಿಗೆ ಏರಿಕೆ ಕಂಡು 17,197.18 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ