ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ರೂಪಾಯಿ ಮೌಲ್ಯ ಬಲವರ್ಧನೆ (Rupee|Forex|Dollar)
Bookmark and Share Feedback Print
 
ದೇಶಿಯ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವು ಹಾಗೂ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಕುಸಿತದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 11ಪೈಸೆ ಏರಿಕೆಯಾಗಿ 45 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ 19 ಪೈಸೆ ಏರಿಕೆ ಕಂಡು 45.11/12 ರೂಪಾಯಿಗಳಿಗೆ ತಲುಪಿತ್ತು.ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 11ಪೈಸೆ ಏರಿಕೆಯಾಗಿ 45 ರೂಪಾಯಿಗಳಿಗೆ ತಲುಪಿದೆ.

ದೇಶಿಯ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವು ಹಾಗೂ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಕುಸಿತದಿಂದಾಗಿ, ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 191.23 ಪಾಯಿಂಟ್‌ಗಳ ಏರಿಕೆ ಕಂಡು 17,387.04 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ, ಡಾಲರ್, ಫಾರೆಕ್ಸ್