ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಎಂಟಿಎನ್‌ಎಲ್‌‌ಗೆ 1,573 ಕೋಟಿ ರೂಪಾಯಿ ನಷ್ಟ (MTNL| Q4 | Bombay Stock Exchange | Fourth quarter)
Bookmark and Share Feedback Print
 
ಮಹಾನಗರ ಟೆಲಿಫೋನ್ ನಿಗಮ ಲಿಮಿಟೆಡ್ (ಎಂಟಿಎನ್‌ಎಲ್)2010ರ ಮಾರ್ಚ್ 31ಕ್ಕೆ ನಾಲ್ಕನೇ ತ್ರೈಮಾಸಿಕ ಅಂತ್ಯಗೊಂಡಂತೆ 1,573.7 ಕೋಟಿ ರೂಪಾಯಿ ನಿವ್ವಳ ನಷ್ಟ ಅನುಭವಿಸಿದೆ.

ಕಳೆದ ವರ್ಷದ ಅವಧಿಯಲ್ಲಿ ಮಾರ್ಚ್ 31ಕ್ಕೆ ನಾಲ್ಕನೇ ತ್ರೈಮಾಸಿಕ ಅಂತ್ಯಗೊಂಡಂತೆ 73 ಕೋಟಿ ರೂಪಾಯಿ ನಿವ್ವಳ ನಷ್ಟ ಕಂಡಿತ್ತು ಎಂದು ಎಂಟಿಎನ್‌ಎಲ್ ಕಂಪೆನಿ ಮುಂಬೈ ಶೇರುಪೇಟೆಗೆ ಸಲ್ಲಿಸಿದ ಮಾಹಿತಿಯಲ್ಲಿ ಬಹಿರಂಗಪಡಿಸಿದೆ.

2010ರ ಮಾರ್ಚ್ 31ಕ್ಕೆ ವರ್ಷಾಂತ್ಯಗೊಂಡಂತೆ, 2,514.8 ಕೋಟಿ ರೂಪಾಯಿಗಳ ನಷ್ಟ ಅನುಭವಿಸಿದೆ.2008-09ರ ಅವಧಿಯಲ್ಲಿ 211.7 ಕೋಟಿ ರೂಪಾಯಿ ನಿವ್ವಳ ಲಾಭಗಳಿಸಿತ್ತು.

ಕಂಪೆನಿಯ ಒಟ್ಟು ಆದಾಯ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ 5,250 ಕೋಟಿ ರೂಪಾಯಿಗಳಿಂದ 4,905 ಕೋಟಿ ರೂಪಾಯಿಗಳಿಗೆ ಕುಸಿತ ಕಂಡಿದೆ.

ಮುಂಬೈ ಶೇರುಪೇಟೆಯಲ್ಲಿ ಎಂಟಿಎನ್‌ಎಲ್ ಶೇರುಗಳು ಶೇ.1.28ರಷ್ಟು ಇಳಿಕೆ ಕಂಡು 65.80 ರೂಪಾಯಿಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ