ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಮಂಗಳೂರು ವಿಮಾನ ನಿಲ್ದಾಣ ಮೇಲ್ದರ್ಜೆಗೆ:ಪಟೇಲ್ (Mangalore airport | Upgrading | Bajpe Airport | Praful Patel)
Bookmark and Share Feedback Print
 
ನಗರದ ವಿಮಾನನಿಲ್ದಾಣದವನ್ನು ಮೇಲ್ದರ್ಜೇಗೇರಿಸಲು ಹೆಚ್ಚುವರಿಯಾಗಿ 100 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಘೋಷಿಸಿದ್ದಾರೆ.

ಪ್ರಸ್ತುತವಿರುವ ರನ್‌ವೇನಲ್ಲಿ ಬೃಹತ್ ವಿಮಾನಗಳನ್ನು ಇಳಿಸಲು ಸಾಧ್ಯವಾಗುವುದಿಲ್ಲ.ಆದ್ದರಿಂದ ರನ್‌ವೇಯನ್ನು 1000 ಅಡಿಯವರೆಗೆ ವಿಸ್ತರಿಸಲಾಗುವುದು ಎಂದು ಬಜ್ಪೆ ವಿಮಾನನಿಲ್ದಾಣದಲ್ಲಿ 160 ಕೋಟಿ ರೂಪಾಯಿ ವೆಚ್ಚದ ನೂತನ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಪ್ರಸ್ತುತ ವಿಮಾನ ನಿಲ್ದಾಣದಲ್ಲಿ 8038 ಅಡಿ ರನ್‌ವೇಯಿದ್ದು, 1000 ಅಡಿ ಉದ್ದದ ರನ್‌ವೇ ನಿರ್ಮಾಣ ಕಾಮಗಾರಿ ಆರಂಭಿಸಲಾಗುತ್ತಿದ್ದು, ಒಂದು ವರ್ಷದೊಳಗಾಗಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಚಿವ ಪಟೇಲ್ ತಿಳಿಸಿದ್ದಾರೆ.

ಮಂಗಳೂರು ವಿಮಾನನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಘೋಷಿಸಬೇಕು ಎನ್ನುವ ಪ್ರಸ್ತಾವನೆ ಈಗಾಗಲೇ ಕೇಂದ್ರ ಸಂಪುಟದ ಮುಂದಿದೆ ಎಂದು ಸಚಿವ ಪ್ರಫುಲ್ ಪಟೇಲ್ ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ