ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Rupee| Dollar | Forex | Foreign funds)
Bookmark and Share Feedback Print
 
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಚೇತರಿಕೆ ಹಾಗೂ ವಿದೇಶಿ ಬಂಡವಾಳದ ಹೊರಹರಿವಿನ ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ 48 ಪೈಸೆ ಕುಸಿತ ಕಂಡು 45.69 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ 13 ಪೈಸೆ ಕುಸಿತ ಕಂಡು 45.21/22 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ 48 ಪೈಸೆ ಕುಸಿತ ಕಂಡಿದೆ.

ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಚೇತರಿಕೆ ಹಾಗೂ ವಿದೇಶಿ ಬಂಡವಾಳದ ಹೊರಹರಿವಿನ ಹೆಚ್ಚಳದಿಂದಾಗಿ,ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಇಳಿಕೆಯಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 361.77 ಪಾಯಿಂಟ್‌ಗಳ ಕುಸಿತ ಕಂಡು 16,632.83 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ