ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಹೆಚ್ಚುವರಿ ವಿದ್ಯುತ್ ಉತ್ಪಾದನೆ ಗುರಿ:ಮೊಂಟೆಕ್ (Planning commission|20,359 MW of power)
Bookmark and Share Feedback Print
 
ದೇಶದ ಮೂಲಸೌಕರ್ಯ ಕ್ಷೇತ್ರದ ವೃದ್ಧಿಗಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ 20,359 ಮೆಗಾವ್ಯಾಟ್‌ ವಿದ್ಯುತ್ ಹೆಚ್ಚುವರಿ ಉತ್ಪಾದನೆ ಹಾಗೂ 2,500 ಕಿ.ಮಿ. ಹೆದ್ದಾರಿ ನಿರ್ಮಾಣದ ಗುರಿಯನ್ನು ಹೊಂದಲಾಗಿದೆ ಎಂದು ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಆಹ್ಲುವಾಲಿಯಾ ಹೇಳಿದ್ದಾರೆ.

ಕಳೆದ ವರ್ಷ ನಿಗದಿಪಡಿಸಲಾದ ವಿದ್ಯುತ್ ಉತ್ಪಾದನೆ ಗುರಿಯನ್ನು ತಲುಪವಲ್ಲಿ ವಿಫಲವಾಗಿದ್ದು, ಕನಿಷ್ಠ ಪ್ರಸಕ್ತ ವರ್ಷಾಂತ್ಯದಲ್ಲಿ ಗುರಿಯನ್ನು ತಲುಪುವ ನಿರೀಕ್ಷೆ ಹೊಂದಲಾಗಿದೆ.

2009-10ರ ಅವಧಿಯಲ್ಲಿ 14,507ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿಯನ್ನು ಹೊಂದಲಾಗಿತ್ತು.ಆದರೆ ಕೇವಲ 9,585 ಮೆಗಾವ್ಯಾಟ್ ಮಾತ್ರ ಉತ್ಪಾದಿಸಲು ಸಾಧ್ಯವಾಯಿತು.

ಅದರಂತೆ, ಹೆದ್ದಾರಿ ನಿರ್ಮಾಣದಲ್ಲಿ ಕೂಡಾ ಗುರಿಯನ್ನು ತಲುಪುವಲ್ಲಿ ವಿಫಲವಾಗಿದೆ. ನಿಗದಿಪಡಿಸಲಾದ 3,165 ಕಿ.ಮಿ. ಹೆದ್ದಾರಿಯ ಗುರಿಯಲ್ಲಿ ಕೇವಲ 2,008 ಹೆದ್ದಾರಿ ನಿರ್ಮಾಣದ ಗುರಿಯನ್ನು ಮಾತ್ರ ತಲುಪಲು ಸಾಧ್ಯವಾಗಿದೆ.

ಹೆದ್ದಾರಿ ನಿರ್ಮಾಣಕ್ಕಾಗಿ 2010-11ರ ಅವಧಿಯಲ್ಲಿ 35,680 ಕೋಟಿ ರೂಪಾಯಿಗಳನ್ನು ಮೀಸಲಾಗಿರಸಲಾಗಿದೆ.ಕಳೆದ ವರ್ಷದ ಅವಧಿಯಲ್ಲಿ 29,934 ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿತ್ತು.
ಸಂಬಂಧಿತ ಮಾಹಿತಿ ಹುಡುಕಿ