ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತ (Rupee | Dollar | Sensex | Foreign funds | Forex)
Bookmark and Share Feedback Print
 
ವಿದೇಶಿ ಬಂದವಾಳದ ಹೊರಹರಿವು ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 6 ಪೈಸೆ ಕುಸಿತವಾಗಿ 45.67 ರೂಪಾಯಿಗಳಿಗೆ ತಲುಪಿದೆ.

ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದಲ್ಲಿ ಚೇತರಿಕೆ ಕೂಡಾ ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 40 ಪೈಸೆ ಇಳಿಕೆ ಕಂಡು 45.61/62 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 6 ಪೈಸೆ ಕುಸಿತವಾಗಿ 45.67 ರೂಪಾಯಿಗಳಿಗೆ ತಲುಪಿದೆ.

ಯುರೋ ಮೌಲ್ಯದ ಕುಸಿತದಿಂದಾಗಿ ಡಾಲರ್ ಮೌಲ್ಯ ಚೇತರಿಕೆಯಾಗುವ ನಿರೀಕ್ಷೆಯ ಹಿನ್ನೆಲೆಯಲ್ಲಿ, ತೈಲ ಕಂಪೆನಿಗಳು ಹಾಗೂ ಅಮುದು ವಹಿವಾಟುದಾರರಿಂದ ಡಾಲರ್‌ಗಳ ಖರೀದಿಯಲ್ಲಿ ಹೆಚ್ಚಳವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 73.01 ಪಾಯಿಂಟ್‌ಗಳ ಕುಸಿತ ಕಂಡು 16,762.55 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ