ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಜೂನ್ ಅವಧಿಯಲ್ಲಿ ಇಂಧನ ದರ ಪರಿಷ್ಕರಣೆ:ಸರಕಾರ (Fuel price | Reliance Industries | Pranab Mukherjee | Petrol | Diesel)
Bookmark and Share Feedback Print
 
ಇಂಧನ ದರ ನಿಗದಿಪಡಿಸುವ ವ್ಯವಸ್ಥೆಯನ್ನು ಮುಂದಿನ ತಿಂಗಳು ಸರಕಾರ ಪರಿಷ್ಕರಿಸಲಿದ್ದು,ಸರಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ನಿಧಾನವಾಗಿ ದರ ಏರಿಕೆ ಮಾಡಲು ಅನುಮತಿ ನೀಡಲಾಗುವುದು ಎಂದು ಉನ್ನತ ಸರಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರದ ವಿತ್ತಸಚಿವ ಪ್ರಣಬ್ ಮುಖರ್ಜಿ ನೇತೃತ್ವದ ಸಚಿವರ ಸಮಿತಿ, ಜೂನ್ ಮೊದಲ ವಾರದಲ್ಲಿ ಸಭೆ ಸೇರಲಿದ್ದು,ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಸೀಮೆ ಎಣ್ಣೆ ದರಗಳನ್ನು ನಿಗದಿಪಡಿಸುವ ಸರಕಾರದ ವ್ಯವಸ್ಥೆಯನ್ನು ಬದಲಿಸುವ ಕುರಿತಂತೆ ಚರ್ಚೆ ನಡೆಸಲಿದ್ದಾರೆ ಎಂದು ಅನಾಮಧೇಯ ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳು ನೀಡಿದ ವರದಿಯನ್ನು ಮುಖರ್ಜಿ ನೇತೃತ್ವದ ಸಮಿತಿ ಪರಿಶೀಲನೆ ನಡೆಸಲಿದ್ದು, ಸೀಮೆಎಣ್ಣೆ ಮತ್ತು ಅಡುಗೆ ಅನಿಲ ದರಗಳನ್ನು ನಿಗದಿಪಡಿಸುತ್ತಿರುವ ಸರಕಾರದ ವ್ಯವಸ್ಥೆಯನ್ನು ಬದಲಿಸುವ ಸಾಧ್ಯತೆಗಳಿವೆ

ಇಂಧನ ದರ ನಿಗದಿಪಡಿಸುವ ಕುರಿತಂತೆ ಮಂಬರುವ ಸಭೆಯಲ್ಲಿ ಮಂಡಿಸಲಾಗುತ್ತಿದೆ. ಮುಂಬರುವ ತಿಂಗಳಿನಿಂದ ಅಡುಗೆ ಅನಿಲ ದರದಲ್ಲಿ ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಪೆಟ್ರೋಲಿಯಂ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ