ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯದಲ್ಲಿ 40 ಪೈಸೆ ಕುಸಿತ (Rupee | Dollar | Depreciate | Forex)
Bookmark and Share Feedback Print
 
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಚೇತರಿಕೆ ಹಾಗೂ ವಿದೇಶಿ ಬಂಡವಾಳದ ಒಳಹರಿವಿನ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 40 ಪೈಸೆ ಕುಸಿತ ಕಂಡು 45.99 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 2 ಪೈಸೆ ಕುಸಿತ ಕಂಡು 45.59/60 ರೂಪಾಯಿಗಳಿಗೆ ತಲುಪಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 40 ಪೈಸೆ ಕುಸಿತ ಕಂಡು 45.99 ರೂಪಾಯಿಗಳಿಗೆ ತಲುಪಿದೆ.

ಶೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಬಿಎಸ್‌ಇ ಸೂಚ್ಯಂಕ 231.11 ಪಾಯಿಂಟ್‌‌ಗಳಿಗೆ ಕುಸಿತ ಕಂಡು 16,644.65 ಅಂಕಗಳಿಗೆ ಕುಸಿತ ಕಂಡಿದ್ದರಿಂದ, ಸಾಗರೋತ್ತರ ಮಾರುಕಟ್ಟೆಯಲ್ಲಿ ಡಾಲರ್ ಮೌಲ್ಯ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಬ್ಯಾಂಕ್‌‌ಗಳಿಂದ ಹಾಗೂ ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ, ಡಾಲರ್, ಕುಸಿತ, ಫಾರೆಕ್ಸ್