ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಬಲವರ್ಧನೆ (Rupee , Forex | Capital inflow | Dollar)
Bookmark and Share Feedback Print
 
ವಿದೇಶಿ ಬಂಡವಾಳ ಹೂಡಿಕೆಯ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ 13ಪೈಸೆ ಏರಿಕೆ ಕಂಡು 46.23 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ, ಡಾಲರ್ ಎದುರಿಗೆ ರೂಪಾಯಿ 77 ಪೈಸೆ ಏರಿಕೆ ಕಂಡು 46.36/37 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ 13ಪೈಸೆ ಏರಿಕೆ ಕಂಡು 46.23 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ಬಂಡವಾಳ ಹೂಡಿಕೆಯ ಒಳಹರಿವು ಹೆಚ್ಚಳ ಹಾಗೂ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತದಿಂದಾಗಿ, ರೂಪಾಯಿ ಮೌಲ್ಯ ಚೇತರಿಕೆಗೆ ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 179.56 ಪಾಯಿಂಟ್‌ಗಳ ಏರಿಕೆ ಕಂಡು 16,588.05 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ