ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Rupee | Depreciate | Dollar | Forex | Sensex)
Bookmark and Share Feedback Print
 
ವಿದೇಶಿ ಬಂಡವಾಳದ ಹೊರಹರಿವು ಹಾಗೂ ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ರೂಪಾಯಿ ಮೌಲ್ಯದಲ್ಲಿ 12 ಪೈಸೆ ಕುಸಿತವಾಗಿ 47.25 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ಬಂಡವಾಳದ ಹೊರಹರಿವು ಹಾಗೂ ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ. ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತ ಕಂಡು 47.13 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ 12 ಪೈಸೆ ಕುಸಿತವಾಗಿ 47.25 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 332.65 ಪಾಯಿಂಟ್‌ಗಳ ಇಳಿಕೆ ಕಂಡು 16,187.03 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ