ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ವಿದೇಶಿ ವಿನಿಮಯ ಸಂಗ್ರಹಕ್ಕೆ ಭಾಧಕವಿಲ್ಲ: ಆರ್‌ಬಿಐ (RBI | Foreign exchange | India | Euro)
Bookmark and Share Feedback Print
 
ಯುರೋ ಮೌಲ್ಯದ ಕುಸಿತದಿಂದಾಗಿ ದೇಶದ ವಿದೇಶಿ ವಿನಿಮಯ ಸಂಗ್ರಹದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಆರ್‌ಬಿಐ ಉಪಗೌವರ್ನರ್ ಕೆ.ಸಿ.ಚಕ್ರವರ್ತಿ ಹೇಳಿದ್ದಾರೆ.

ಯುರೋ ಮೌಲ್ಯದ ಕುಸಿತದಿಂದ ನಮಗೆ ಕಳವಳವಾಗಿಲ್ಲ. ರೂಪಾಯಿ ಸೇರಿದಂತೆ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಚೇತರಿಕೆಯಾಗುತ್ತಿದೆ. ಆದ್ದರಿಂದ ಪ್ರಸ್ತುತ ಸಮಯದಲ್ಲಿ ಕಳವಳಪಡುವ ಅಗತ್ಯವಿಲ್ಲ ಎಂದು ಚಕ್ರವರ್ತಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ರೂಪಾಯಿ ದರಗಳಲ್ಲಿ ನಮ್ಮ ವಿದೇಶಿ ವಿನಿಮಯ ಸಂಗ್ರಹ ಏರಿಕೆ ಕಂಡಿದೆ. ಹೆಚ್ಚಿನ ಪ್ರಮಾಣದಲ್ಲಿ ಡಾಲರ್‌ಗಳಲ್ಲಿ ವಹಿವಾಟು ನಡೆಸುತ್ತಿರುವುದರಿಂದ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಕೇರಳ ರಾಜ್ಯದಲ್ಲಿ ಮೈಕ್ರೋ, ಸಣ್ಣ ಮತ್ತು ಮಧ್ಯಮ ಉದ್ಯಮ ಕ್ಷೇತ್ರಗಳ ಬೆಳವಣಿಗೆ ಸಮಾಧಾನಕರವಾಗಿಲ್ಲ ಎಂದು ಚಕ್ರವರ್ತಿ ಅಸಮಧಾನ ವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ