ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಬಾಂಗ್ಲಾ: ಮೊಬೈಲ್ ಬಳಕೆದಾರರ ಸಂಖ್ಯೆಯಲ್ಲಿ ಹೆಚ್ಚಳ (Cellphone | Bangladesh | Grow | Subscribers | BTRC)
Bookmark and Share Feedback Print
 
ಬಾಂಗ್ಲಾದೇಶದಲ್ಲಿ ಮೊಬೈಲ್ ಬಳಕೆದಾರರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಜನೆವರಿಯಿಂದ ನಾಲ್ಕು ತಿಂಗಳ ಅವಧಿಯಲ್ಲಿ ನಾಲ್ಕು ಮಿಲಿಯನ್ ಗ್ರಾಹಕರು ನೂತನವಾಗಿ ಸೇರ್ಪಡೆಯಾಗಿದ್ದಾರೆ ಎಂದು ಟೆಲಿಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಜನೆವರಿ ತಿಂಗಳಿನಿಂದ ಏಪ್ರಿಲ್ ತಿಂಗಳ ಅವಧಿಯವರೆಗೆ ಅವಧಿಯಲ್ಲಿ, ಮೊಬೈಲ್ ಬಳಕೆದಾರರ ಸಂಖ್ಯೆ ಶೇ. 164ರಷ್ಟು ಹೆಚ್ಚಳವಾಗಿ 3.93 ಮಿಲಿಯನ್‌ಗಳಿಗೆ ತಲುಪಿದೆ ಎಂದು ಟೆಲಿಕಮ್ಯೂನಿಕೇಶನ್ ರೆಗ್ಯೂಲೆಟರಿ ಕಮಿಶನ್ ಅಧಿಕಾರಿಗಳು ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ.

ದೇಶದ ಒಟ್ಟು ಮೊಬೈಲ್ ಬಳಕೆದಾರರ ಸಂಖ್ಯೆ, ಏಪ್ರಿಲ್ 2010ಕ್ಕೆ 56.36 ಮಿಲಿಯನ್‌ಗಳಿಗೆ ತಲುಪಿದೆ ಎಂದು ಟೆಲಿಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳ ಅವಧಿಯಲ್ಲಿ ದೇಶದಲ್ಲಿನ ರಾಜಕೀಯ ಸ್ಥಿರತೆಯಿಂದಾಗಿ, ಟೆಲಿಕಾಂ ಕ್ಷೇತ್ರದಲ್ಲಿ ಚೇತರಿಕೆಯಾಗಿದೆ ಎಂದು ಟೆಲಿಕಾಂ ಖಾತೆ ಸಚಿವ ರಜಿಯುದ್ದಿನ್ ಅಹ್ಮದ್ ರಾಜು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ