ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ದೇಶದ ಜಿಡಿಪಿ ದರ ಶೇ.6.2ಕ್ಕೆ ತಲುಪಲಿದೆ: ಐಎನ್‌ಜಿ (Economy growth| GDP | Growth | ING Vysya)
Bookmark and Share Feedback Print
 
ದೇಶದ ಕೈಗಾರಿಕೆ ಮತ್ತು ಸೇವಾ ಕ್ಷೇತ್ರಗಳ ಚೇತರಿಕೆಯಿಂದಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶೇ.8.2ರಷ್ಟು ಏರಿಕೆ ಕಾಣುವ ಸಾಧ್ಯತೆಗಳಿವೆ ಎಂದು ಐಎನ್‌ಜಿ ವೈಶ್ಯ ಬ್ಯಾಂಕ್ ಮೂಲಗಳು ತಿಳಿಸಿವೆ.

ಕಳೆದ ವರ್ಷದ ಅವಧಿಯಲ್ಲಿ ದೇಶದ ಆರ್ಥಿಕ ವೃದ್ಧಿ ದರ ಶೇ.7.2ಕ್ಕೆ ತಲುಪುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿತ್ತು.ಆದರೆ ಕೈಗಾರಿಕೋದ್ಯಮದ ಚೇತರಿಕೆಯಿಂದಾಗಿ 2010-11ರ ಆರ್ಥಿಕ ವರ್ಷಾಂತ್ಯಕ್ಕೆ ಶೇ,8.2ಕ್ಕೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಐಎನ್‌ಜಿ ವೈಶ್ಯ ಬ್ಯಾಂಕ್ ಆರ್ಥಿಕ ತಜ್ಞೆ ದೀಪಾಲಿ ಭಾರ್ಗವಾ ಹೇಳಿದ್ದಾರೆ.

ವಿತ್ತ ಸಚಿವ ಪ್ರಣಬ್ ಮುಖರ್ಜಿ, ದೇಶದ ಆರ್ಥಿಕ ವೃದ್ಧಿ ದರ ಶೇ.8.5ಕ್ಕೆ ತಲುಪುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ ಜಿಡಿಪಿ ದರ ಶೇ.8ಕ್ಕೆ ತಲುಪಲಿದೆ ಎಂದು ಅಧ್ಯಯನ ವರದಿಯಲ್ಲಿ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ