ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ (Rupee | US dollar | Foreign Exchange | Forex)
Bookmark and Share Feedback Print
 
ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 20 ಪೈಸೆ ಏರಿಕೆಯಾಗಿ 46.76 ರೂಪಾಯಿಗಳಿಗೆ ತಲುಪಿದೆ.

ಏತನ್ಮದ್ಯೆ, ಸಾಗರೋತ್ತರ ಮಾರುಕಟ್ಟೆಗಳಲ್ಲಿ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ರೂಪಾಯಿ ಮೌಲ್ಯ ಏರಿಕೆ ಕಂಡಿದೆ ಎದು ಮಾರುಕಟ್ಟೆ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 15 ಪೈಸೆ ಕುಸಿತ ಕಂಡು 46.96/97 ರೂಪಾಯಿಗಳಿಗೆ ತಲುಪಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 20 ಪೈಸೆ ಏರಿಕೆಯಾಗಿ 46.76 ರೂಪಾಯಿಗಳಿಗೆ ತಲುಪಿದೆ.

ದೇಶಿಯ ಶೇರುಪೇಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ 279.30 ಪಾಯಿಂಟ್‌ಗಳ ಏರಿಕೆ ಕಂಡು 16,724.91 ರೂಪಾಯಿಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ