ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಪೆಟ್ರೋಲ್ ದರ ಏರಿಕೆ: ಜೂನ್ 7 ರಂದು ಸಚಿವ ಸಂಪುಟ ಸಭೆ (Petrol | Diesel | Prices | Murli Deora | Empowered group)
Bookmark and Share Feedback Print
 
PTI
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಕುರಿತಂತೆ ನಿರ್ಧರಿಸಲು ಜೂನ್ 7 ರಂದು ಅಧಿಕಾರಯುತ ಸಚಿವರ ಗುಂಪು ಸಭೆ ನಡೆಸಲಿದೆ ಎಂದು ಕೇಂದ್ರದ ಪೆಟ್ರೋಲಿಯಂ ಖಾತೆ ಸಚಿವ ಮುರಳಿ ದೇವ್ರಾ ಹೇಳಿದ್ದಾರೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ, ಸರಕಾರಿ ಸ್ವಾಮ್ಯದ ತೈಲ ಕಂಪೆನಿಗಳು ಎದುರಿಸುತ್ತಿರುವ ನಷ್ಟವನ್ನು ಕಡಿಮೆಗೊಳಿಸಲು ಸೂತ್ರಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ದೇವ್ರಾ ತಿಳಿಸಿದ್ದಾರೆ.

ಪೆಟ್ರೋಲಿಯಂ ಸಚಿವಾಲಯದ ಸಂಸದೀಯ ಸಂಪರ್ಕ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ದೇವ್ರಾ ಆಗಮಿಸಿದ್ದರು.

ಗ್ರಾಹಕರು, ಸಮಾಜದ ದುರ್ಬಲ ವರ್ದವರ ಮತ್ತು ಸರಕಾರಿ ಸ್ವಾಮ್ಯದ ತೈಲ ಕಂಪೆನಿಗಳ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರಕಾರ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ನುಡಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾಗುತ್ತಿರುವುದರಿಂದ, ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಕೂಡಾ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಪೆಟ್ರೋಲಿಯಂ ಸಚಿವಾಲಾಯದ ಅಧಿಕಾರಿಗಳು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಪ್ರತಿ ಬ್ಯಾರೆಲ್‌ಗೆ 85ಡಾಲರ್‌ಗಳಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ದರ ಏರಿಕೆ ಮಾಡದೆ ಪೆಟ್ರೋಲ್ ,ಡೀಸೆಲ್, ಅಡುಗೆ ಅನಿಲ ಮತ್ತು ಸೀಮೆಎಣ್ಣೆ ಮಾರಾಟ ಮಾಡಿದಲ್ಲಿ ವಾರ್ಷಿಕವಾಗಿ 1 ಲಕ್ಷ ಕೋಟಿ ರೂಪಾಯಿ ನಷ್ಟವನ್ನು ಎದುರಿಸಬೇಕಾಗುತ್ತದೆ ಎಂದು ಪೆಟ್ರೋಲಿಯಂ ಕಾರ್ಯದರ್ಶಿ ಎಸ್.ಸುಂದರೇಶನ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ