ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್ : ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Mumbai|Forex|Interbank Foreign Exchange| Rupee)
Bookmark and Share Feedback Print
 
ದೇಶಿಯ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಹೊರಹರಿವು ಹಾಗೂ ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ರೂಪಾಯಿ ಮೌಲ್ಯದಲ್ಲಿ 27ಪೈಸೆ ಇಳಿಕೆಯಾಗಿ 47.25 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 2 ಪೈಸೆ ಕುಸಿತ ಕಂಡು 46.98/99 ರೂಪಾಯಿಗಳಿಗೆ ತಲುಪಿತ್ತು.ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 27ಪೈಸೆ ಇಳಿಕೆಯಾಗಿ 47.25 ರೂಪಾಯಿಗಳಿಗೆ ತಲುಪಿದೆ.

ದೇಶಿಯ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಹೊರಹರಿವು ಹಾಗೂ ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ,ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 225.27 ಪಾಯಿಂಟ್‌ಗಳ ಇಳಿಕೆ ಕಂಡು 16,244.28 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ