ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಚಿನ್ನದ ದರ : ಪ್ರತಿ 10ಗ್ರಾಂಗೆ 18,660 ರೂಪಾಯಿ (Sensex| Gold | Global trend)
Bookmark and Share Feedback Print
 
ಜಾಗತಿಕ ಮಾರುಕಟ್ಟೆಗಳ ಸ್ಥಿರ ವಹಿವಾಟಿನ ಮಧ್ಯೆಯು, ಮದುವೆ ಸೀಜನ್ ಆರಂಭವಾಗಲಿರುವುದರಿಂದ, ಚಿನ್ನದ ಸಂಗ್ರಹಗಾರರು ಹಾಗೂ ಚಿನ್ನಾಭರಣಗಳ ಮಾಲೀಕರು ಚಿನ್ನದ ಖರೀದಿಯಲ್ಲಿ ತೊಡಗಿದ್ದರಿಂದ, ಚಿನ್ನದ ದರ ಪ್ರತಿ 10ಗ್ರಾಂಗೆ 18,660 ರೂಪಾಯಿಗಳಿಗೆ ತಲುಪಿದೆ.

ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಪ್ರತಿ 10ಗ್ರಾಂಗೆ 18,510 ರೂಪಾಯಿಗಳಿಗೆ ತಲುಪಿತ್ತು. ಇಂದಿನ ವಹಿವಾಟಿನಲ್ಲಿ 260 ರೂಪಾಯಿಗಳವರೆಗೆ ಏರಿಕೆ ಕಂಡಿದೆ.

ಮುಂಬರುವ ದಿನಗಳಲ್ಲಿ ಮದುವೇ ಸೀಜನ್ ಎದುರಾಗಲಿರುವ ಹಿನ್ನೆಲೆಯಲ್ಲಿ , ಆಭರಣಗಳ ತಯಾರಕರು ಹಾಗೂ ಚಿನ್ನಾಭರಣ ವಹಿವಾಟುದಾರರು ಹೆಚ್ಚಿನ ಪ್ರಮಾಣದಲ್ಲಿ ಚಿನ್ನವನ್ನು ಖರೀದಿಸುತ್ತಿರುವುದರಿಂದ ಚಿನ್ನದ ದರದಲ್ಲಿ ದಾಖಲೆಯ ಏರಿಕೆಯಾಗಿದೆ.

ಸಾಗರೋತ್ತರ ಮಾರುಕಟ್ಟೆಗಳಲ್ಲಿ ಚಿನ್ನದ ದರ ಪ್ರತಿ ಔನ್ಸ್‌ಗೆ 1,192.30 ಡಾಲರ್‌ಗಳಿಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ