ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ (Rupee | Forex | Dollar | Asian currencies)
Bookmark and Share Feedback Print
 
ವಿದೇಶಿ ಬಂಡವಾಳದ ಒಳಹರಿವು ಹಾಗೂ ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ದುರ್ಬಲ ವಹಿವಾಟಿನಿಂದಾಗಿ, ರೂಪಾಯಿ ಮೌಲ್ಯದಲ್ಲಿ 34 ಪೈಸೆ ಏರಿಕೆ ಕಂಡು 47.36 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 72 ಪೈಸೆ ಇಳಿಕೆ ಕಂಡು 47.70/71ರೂಪಾಯಿಗಳಿಗೆ ತಲುಪಿದೆ. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 34 ಪೈಸೆ ಏರಿಕೆ ಕಂಡು 47.36 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳ ಹಾಗೂ ಅಮುದು ವಹಿವಾಟುದಾರರು ಡಾಲರ್‌ಗಳ ಮಾರಾಟದಲ್ಲಿ ತೊಡಗಿದ್ದರಿಂದ, ರೂಪಾಯಿ ಮೌಲ್ಯದ ಚೇತರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 231.41 ಪಾಯಿಂಟ್‌ಗಳ ಚೇತರಿಕೆ ಕಂಡು 16,253.89 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ