ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಅಭಿವೃದ್ಧಿ ಕೇಂದ್ರ:ಇನ್ಫೋಸಿಸ್‌ ಪ್ರಸ್ತಾವನೆಗೆ ಸರಕಾರ ಅಸ್ತು (Infosys Technologies Ltd | Proposals | Development centres)
Bookmark and Share Feedback Print
 
ದೇಶದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಅಗ್ರಸ್ಥಾನದಲ್ಲಿರುವ ಇನ್ಫೋಸಿಸ್ ಟೆಕ್ನಾಲಾಜೀಸ್ ಲಿಮಿಟೆಡ್,ನಗರದಲ್ಲಿ 2,950 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸುವ ಸಾಫ್ಟ್‌ವೇರ್ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆಗೆ, ಸರಕಾರ ಅಂತಿಮವಾಗಿ ಪ್ರಸ್ತಾವನೆಗೆ ಸಮ್ಮತಿ ಸೂಚಿಸಿದೆ.

ಇನ್ಫೋಸಿಸ್ ಟೆಕ್ನಾಲಾಜೀಸ್ ಸಂಸ್ಥೆ, ನಗರದ ಆಗ್ನೇಯ ಭಾಗದಲ್ಲಿರುವ ಸರ್ಜಾಪುರ್ ಪಟ್ಟಣದಲ್ಲಿ ಹಾಗೂ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಹತ್ತಿರದಲ್ಲಿರುವ ದೇವನಹಳ್ಳಿ ಪ್ರದೇಶದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲು ಅನುಮೋದನೆಗಾಗಿ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿತ್ತು ಎಂದು ಭಾರಿ ಕೈಗಾರಿಕೆ ಸಚಿವ ಮುರುಗೇಶ್ ಆರ್.ನಿರಾನಿ ಹೇಳಿದ್ದಾರೆ.

ಸರಕಾರದ ಉನ್ನತ ಮಟ್ಟದ ಸಮಿತಿ, ಇನ್ಫೋಸಿಸ್ ಪ್ರಸ್ತಾವನೆಯನ್ನು ಪರಿಶೀಲಿಸಿದ್ದು, ಅನುಮತಿ ನೀಡಿದೆ ಎಂದು ಸಚಿವ ನಿರಾನಿ ತಿಳಿಸಿದ್ದಾರೆ.

ಇನ್ಫೋಸಿಸ್ ನಿರ್ದೇಶಕ ಟಿ.ವಿ.ಮೋಹನ್‌ದಾಸ್‌ ಪೈ ಮಾತನಾಡಿ, ರಾಜ್ಯ ಸರಕಾರದ ಉನ್ನತ ಮಟ್ಟದ ಸಮಿತಿ ಸಾಫ್ಟ್‌ವೇರ್ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲು ಅನುಮೋದನೆ ನೀಡಿದೆ ಎಂದು ಹೇಳಿದ್ದಾರೆ.

ಇನ್ಫೋಸಿಸ್‌ನ ಸಾಫ್ಟ್‌ವೇರ್ ಅಭಿವೃದ್ಧಿ ಕೇಂದ್ರ ಹಾಗೂ ಕೇಂದ್ರ ಕಚೇರಿ, ಬೆಂಗಳೂರಿನ ಹೊರವಲಯದಲ್ಲಿರುವ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸ್ಥಾಪಿಸಲಾಗಿದ್ದು, ಸುಮಾರು 16,000 ತಂತ್ರಜ್ಞರು ಕಾರ್ಯನಿರ್ವಹಿಸುತ್ತಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ