ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಕರ್ನಾಟಕದಲ್ಲಿ ಐದು ಲಕ್ಷ ಕೋಟಿ ರೂ.ಬಂಡವಾಳ ಹೂಡಿಕೆ (Karnataka | BJP | Yeddyurappa | Bangalore | Siliycon City)
Bookmark and Share Feedback Print
 
ಆಡಳಿತಾರೂಢ ಬಿಜೆಪಿ ಸರ್ಕಾರ ಸಿಲಿಕಾನ್ ಸಿಟಿಯಲ್ಲಿ ಆಯೋಜಿಸಿದ್ದ ವಿಶ್ವ ಬಂಡವಾಳ ಹೂಡಿಕೆ ಸಮಾವೇಶದ ಮೊದಲ ದಿನವೇ ಸುಮಾರು ಮೂರು ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಒಪ್ಪಂದಕ್ಕೆ ಸಹಿ ಹಾಕಲಾಗಿದ್ದು, ಎರಡನೇ ಹಾಗೂ ಅಂತಿಮ ದಿನವಾದ ಶುಕ್ರವಾರವೂ ಕೂಡ ಸುಮಾರು ಎರಡು ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಈ ಸಮಾವೇಶದಲ್ಲಿ ದೇಶ ಹಾಗೂ ವಿದೇಶದ ಕಂಪನಿಗಳಿಂದ ಸುಮಾರು ಐದು ಲಕ್ಷ ಕೋಟಿ ರೂಪಾಯಿ ಬಂಡವಾಳ ರಾಜ್ಯದಲ್ಲಿ ಹೂಡಿಕೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆ ನಿಟ್ಟಿನಲ್ಲಿ ವಿಶ್ವಬಂಡವಾಳ ಹೂಡಿಕೆ ಸಮಾವೇಶದ ಅಂತಿಮ ದಿನವಾದ ಇಂದು ಬಾಷ್ ಕಂಪನಿ, ಇನ್ಫೋಸಿಸ್, ವಿಪ್ರೋ, ರಾಜಶ್ರೀ ಸಿಮೆಂಟ್, ಶೆಲ್ ಸಂಸ್ಥೆ, ಹಿಂದೂಸ್ಥಾನ ಪೆಟ್ರೋಲಿಯಂ ಸೇರಿದಂತೆ ಹಲವಾರು ಪ್ರತಿಷ್ಠಿತ ಕಂಪನಿಗಳ ಜೊತೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ