ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಆಟೋಮೊಬೈಲ್ ಕ್ಷೇತ್ರದಲ್ಲಿ 7,500 ಕೋಟಿ ರೂ.ಹೂಡಿಕೆ (BJP | Yeddyurappa | Congress | Ashok | Auto moblie | JDS)
Bookmark and Share Feedback Print
 
ಉದ್ಯಾನನಗರಿಯಲ್ಲಿ ನಡೆದ ವಿಶ್ವ ಬಂಡವಾಳ ಸಮಾವೇಶದಲ್ಲಿ ಆಟೋಮೊಬೈಲ್ ಕ್ಷೇತ್ರದಲ್ಲಿ 7,500 ಕೋಟಿ ರೂಪಾಯಿಯಷ್ಟು ಹೂಡಿಕೆಯಾಗಿದೆ ಎಂದು ಸಾರಿಗೆ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಅಂಗವಾಗಿ ಆಯೋಜಿಸಿದ್ದ ಆಟೋಮೊಬೈಲ್ ಕ್ಷೇತ್ರ ಕುರಿತ ವಿಚಾರಗೋಷ್ಠಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕರ್ನಾಟಕ ಆಟೋಮೊಬೈಲ್ ಕ್ಷೇತ್ರಕ್ಕೆ ಅಗತ್ಯವಾದ ಪರಿಸರ ಹಾಗೂ ಮಾನವ ಸಂಪನ್ಮೂಲ ಹೊಂದಿದೆ. ಹೀಗಾಗಿ 7,500ಕೋಟಿ ರೂಪಾಯಿ ಹೂಡಿಕೆ ಮಾಡಲು ಸಂಸ್ಥೆಗಳು ಮುಂದೆ ಬಂದಿವೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಟಯೋಟಾ ಕಿರ್ಲೋಸ್ಕರ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಹಿರೋಷಿ ನಾಕಗಾವ ಅವರು, ಸಂಸ್ಥೆಯು ತನ್ನ ಬಿಡದಿ ಘಟಕವನ್ನು 3,200ಕೋಟಿ ರೂಪಾಯಿ ವೆಚ್ಚದಲ್ಲಿ ವಿಸ್ತರಿಸುವ ಪ್ರಕ್ರಿಯೆ ಆರಂಭಿಸಿದೆ ಎಂದರು. ಇಟೋಸ್ ಎಂಬ ಹೊಸ ಕಾರುಗಳನ್ನು ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡುವ ಉದ್ದೇಶಕ್ಕಾಗಿ ಬಿಡದಿ ಘಟಕವನ್ನು ವಿಸ್ತರಿಸಲು ಸಂಸ್ಥೆ ಮುಂದಾಗಿದೆ. ಇಧರಿಂದ ಎರಡು ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ